ಶಿವಮೊಗ್ಗ : ಸಾಲಗಾರರ ಕಿರುಕುಳ ತಾಳಲಾರದೆ ಆಟೋ ಚಾಲಕನೊಬ್ಬ ವಿಡಿಯೋ ರೆಕಾರ್ಡ್ ಮಾಡಿ, ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಆಟೋ ಚಾಲಕ ಮಂಜುನಾಥ್ (35) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > >ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ
ಮಂಜುನಾಥ್ ಅವರು ತಮ್ಮ ಜೀವನೋಪಾಯಕ್ಕಾಗಿ ಮತ್ತು ಪ್ಯಾಸೆಂಜರ್ ಆಟೋಗಾಗಿ ಸುಮಾರು 30 ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಅವರಿಗೆ ಸಾಲದ ಹಣವನ್ನು ಸಕಾಲದಲ್ಲಿ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲದ ಹಣ ವಾಪಸ್ ಬಾರದಿದ್ದಕ್ಕೆ ಸಾಲಗಾರರು ಮಂಜುನಾಥ್ ಅವರ ಆಟೋವನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಸಂಸಾರ ನಡೆಸಲು ಮುಖ್ಯ ಆಧಾರವಾಗಿದ್ದ ಆಟೋ ಕೈತಪ್ಪಿ ಹೋದ ಹಿನ್ನೆಲೆಯಲ್ಲಿ ತೀವ್ರ ಮನನೊಂದಿದ್ದ ಮಂಜುನಾಥ್, ಕೊನೆಗೆ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮಂಜುನಾಥ್ ಅವರು ಸಾವಿಗೂ ಮುನ್ನ ತಮಗಾದ ಅನ್ಯಾಯ ಮತ್ತು ಸಾಲಗಾರರ ಕಾಟದ ಕುರಿತು ವಿಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದು ಅವರ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮತ್ತು ಕಣ್ಣೀರು ತರಿಸಿದೆ.
ಇದನ್ನೂ ಓದಿ > > ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!
ಈ ದುರಂತ ಘಟನೆಗೆ ಸಂಬಂಧಿಸಿದಂತೆ ಮೃತ ಮಂಜುನಾಥ್ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ














