ಶಿವಮೊಗ್ಗ: ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಸುಮಾರು 60 ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ > > ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ, ರಕ್ಷಿಸಿದ ಯುವಕರು
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದ ಪ್ರದೀಪ್ ಗಾಯಗೊಂಡ ವ್ಯಕ್ತಿ. ಇವರು ಕುಟುಂಬ ಸಮೇತರಾಗಿ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿದ್ದರು. ಶಂಕರಾಚಾರ್ಯರ ಸರ್ವಜ್ಞ ಪೀಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಿಢೀರನೆ ತಲೆಸುತ್ತು ಬಂದಿದ್ದರಿಂದ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದ್ದಾರೆ.
ಇದನ್ನೂ ಓದಿ > > ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ
ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಜೀಪ್ ಚಾಲಕರು, ಕಂದಕಕ್ಕೆ ಹಗ್ಗ ಇಳಿಸಿ ಪ್ರದೀಪ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ಬಳಿಕ ತಮ್ಮ ಜೀಪಿನಲ್ಲಿ ಗಾಯಾಳುವನ್ನು ಬೆಟ್ಟದ ಕೆಳಭಾಗಕ್ಕೆ ಕರೆತಂದಿದ್ದಾರೆ.
ಇದನ್ನೂ ಓದಿ > > ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಜೀವ ರಕ್ಷಿಸಿದ 112 ಸಿಬ್ಬಂದಿ!
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.















