ಶಿವಮೊಗ್ಗ : ನಗರದ ಕುವೆಂಪು ರಸ್ತೆಯಲ್ಲಿ ಫುಟ್ಪಾತ್ನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಹಣ್ಣಿನ ಅಂಗಡಿಗಳ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ
ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ಒಟ್ಟು 11 ಹಣ್ಣಿನ ಅಂಗಡಿಗಳು, ಕಬ್ಬಿನ ಹಾಲು ಹಾಗೂ ಇತರೆ ತಳ್ಳುವ ಗಾಡಿಗಳನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಈ ಪ್ರಮುಖ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸಲಿದ್ದು, ರಸ್ತೆ ಬದಿಯಲ್ಲೇ ಎಲ್ಲೆಂದರಲ್ಲಿ ವ್ಯಾಪಾರ ನಡೆಸುತ್ತಿದ್ದರಿಂದ ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ಭಾರಿ ತೊಂದರೆಯಾಗುತ್ತಿತ್ತು. ಅಲ್ಲದೆ, ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.
ಇದನ್ನೂ ಓದಿ > > ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ದಾಖಲೆಗಳ ಪರಿಶೀಲನೆ
ರಸ್ತೆ ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಮೂರು ಬಾರಿ ನೋಟೀಸ್ ನೀಡಿದ್ದರೂ ವ್ಯಾಪಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ನೋಟೀಸ್ ನೀಡಲು ಬಂದ ಅಧಿಕಾರಿಗಳೊಂದಿಗೆ ಕೆಲವರು ವಾಗ್ವಾದ ನಡೆಸಿ ಕಳುಹಿಸಿದ್ದರು ಎಂಬ ಆರೋಪವೂ ಇತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಪೊಲೀಸರು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿ ರಸ್ತೆಯನ್ನು ಮುಕ್ತಗೊಳಿಸಿದ್ದಾರೆ.
ಇದನ್ನೂ ಓದಿ > > ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!














