ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ 18,051 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.
ಜಲಾಶಯಕ್ಕೆ ಪ್ರಸ್ತುತ 19,708 ಕ್ಯೂಸೆಕ್ ಒಳಹರಿವು ಹರಿದು ಬರುತ್ತಿದೆ. ಹೀಗಾಗಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಕ್ರಸ್ಟ್ ಗೇಟ್‌ಗಳು ಹಾಗೂ ಪವರ್ ಹೌಸ್ ಮೂಲಕ ಒಟ್ಟು 18,051 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹೊರಬಿಡಲಾಗುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದ್ದು, ಪ್ರಸ್ತುತ ನೀರಿನ ಮಟ್ಟ 588.21 ಮೀಟರ್ ತಲುಪಿದೆ. ಜಲಾಶಯವು ಭರ್ತಿಯಾಗಿದೆ. ಒಟ್ಟು 3.24 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 3.206 ಟಿಎಂಸಿ ನೀರು ಸಂಗ್ರಹವಾಗಿದೆ.















