ಶಿವಮೊಗ್ಗ: ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆನಂದಪುರ ಸಮೀಪದ ಉಳ್ಳೂರು ಬಳಿ ನಡೆದಿದೆ.
ಬಂಧಿತರನ್ನು ಮುಜ್ಜು ಅಲಿಯಾಸ್ ಮುಜಾಮಿಲ್ ಮತ್ತು ಹಪೀಜುಲ್ಲಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?
ಸಾಗರ ಕಡೆಯಿಂದ ಆನಂದಪುರದ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಮತ್ತು ಅವರ ತಂಡದವರು ಉಳ್ಳೂರು ಬಳಿ ಕಾವಲು ನಿಂತಿದ್ದರು. ಆ ಸಮಯದಲ್ಲಿ ಸಂಶಯಾಸ್ಪದವಾಗಿ ಬಂದ ಬೈಕನ್ನು ತಡೆದು ನಿಲ್ಲಿಸಿ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಅಕ್ರಮವಾಗಿ ಬಚ್ಚಿಟ್ಟು ಸಾಗಿಸುತ್ತಿದ್ದ ಗಾಂಜಾ ಪತ್ತೆಯಾಗಿದೆ.
ಪೊಲೀಸರು ಆರೋಪಿಗಳಿಂದ 95 ಗ್ರಾಂ ತೂಕದ ಗಾಂಜಾವನ್ನು ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ > ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














