ತೀರ್ಥಹಳ್ಳಿ: ತಾಲ್ಲೂಕಿನ ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಸವಾರರು ಗಾಯಗೊಂಡ ಘಟನೆ ನಡೆದಿದೆ.
ಘಟನೆ 1: ಬೈಕ್‌ಗಳ ನಡುವೆ ಡಿಕ್ಕಿ
ಆಗುಂಬೆ ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾ ಮುಂಭಾಗದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಸವಾರನ ಪಕ್ಕೆಲುಬಿಗೆ ಬಲವಾದ ಪೆಟ್ಟು ಬಿದ್ದಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ 2: ಕಾರು-ಬೈಕ್ ಅಪಘಾತ
ಮೊದಲ ಅಪಘಾತ ನಡೆದ ಕೆಲವೇ ಕ್ಷಣಗಳಲ್ಲಿ ಸಮೀಪದ ಚರ್ಚ್ ಎದುರು ಕಾರು ಮತ್ತು ಬೈಕ್ ನಡುವೆ ಮತ್ತೊಂದು ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













