• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ, ವಿದ್ಯಾರ್ಥಿಗಳಿಗೆ ಎಸ್ಪಿ ನಿಖಿಲ್ ನೀಡಿದ ಸಲಹೆಗಳೇನು?

ನಶೆಯಿಂದ ದೂರವಿದ್ದಾಗಲೆ ಸದೃಢ ಭಾರತ ನಿರ್ಮಾಣ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 17, 2026
in ಶಿವಮೊಗ್ಗ
ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ, ವಿದ್ಯಾರ್ಥಿಗಳಿಗೆ ಎಸ್ಪಿ ನಿಖಿಲ್ ನೀಡಿದ ಸಲಹೆಗಳೇನು?
Share on FacebookShare on TwitterShare on WhatsApp

ಶಿವಮೊಗ್ಗ: ನಶಾಮುಕ್ತ ಭಾರತವು ಕೇವಲ ಸರ್ಕಾರದ ಯೋಜನೆಯಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಕರು ಮಾದಕ ವ್ಯಸನಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯವಂತ, ಶಕ್ತಿಶಾಲಿ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಐಕ್ಯೂಎಸಿ, ಎನ್‌ಎಸ್‌ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯುವ ದಿನ ಅಂಗವಾಗಿ ಆಯೋಜಿಸಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ > > ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿ ನೇಣಿಗೆ ಶರಣು!

ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿರತೆ ಹಾಗೂ ಕುಟುಂಬದ ನೆಮ್ಮದಿಯನ್ನು ಹಾಳುಮಾಡುವುದಲ್ಲದೆ, ಅಪರಾಧ ಮತ್ತು ರಸ್ತೆ ಅಪಘಾತಗಳಿಗೂ ಕಾರಣವಾಗುತ್ತದೆ. ಕಳೆದ ವರ್ಷ ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಗಾಂಜಾ ಪ್ರಕರಣಗಳು ದಾಖಲಾಗಿದ್ದು, ನಗರ ಪ್ರದೇಶಗಳಲ್ಲಿಯೇ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ವಯೋಸಹಜ ವ್ಯಾಮೋಹಗಳಿಂದ ಆರಂಭವಾಗುವ ದುಶ್ಚಟಗಳು, ವ್ಯಕ್ತಿಯ ಬದುಕನ್ನು ಅಧೋಗತಿಗೆ ತಳ್ಳುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಒತ್ತಡಗಳಿಗೆ ಮಣಿಯದೆ ಮಾದಕ ವ್ಯಸನಗಳಿಗೆ ಸ್ಪಷ್ಟವಾಗಿ ‘ಇಲ್ಲ’ ಎಂದು ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ > >ಸಾಲಗಾರರ ಕಾಟಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಮಾಜ ಸೇವೆಯಂತಹ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಅಮೂಲ್ಯವಾದ ಬದುಕನ್ನು, ಸಮಾಜಮುಖಿ ಕಾರ್ಯಗಳಿಗೆ ಮೀಸಲಿಡಿ. ಸಮಾಜದ ಪ್ರತಿಯೊಬ್ಬರೂ ನಶಾಮುಕ್ತ ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕು. ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದರ ಜೊತೆಗೆ, ವ್ಯಸನಕ್ಕೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ > > ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌ !

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿಶೇಷಾಧಿಕಾರಿ ಡಾ.ಆರ್.ಎಂ.ಜಗದೀಶ್‌, ಎನ್‌ಎಸ್‌ಎಸ್ ಅಧಿಕಾರಿಗಳಾದ ಪ್ರವೀಣ್ ಬಿ.ಎನ್, ಘನಶ್ಯಾಮ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಸೌಪರ್ಣಿಕ ಉಮೇಶ್, ರೋವರ್ಸ್ ರೇಂಜರ್ಸ್ ಘಟಕದ ಸಂಚಾಲಕರಾದ ಸತಿ ಭಾರತಿ ದಯಾನಂದ, ನವೀನ್ ತೇಲ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: CRIMEkannada newskannada news livelatest newsmalnad newsshimogashivamoggaWhat are the suggestions of SP Nikhil for the Drug-Free India Campaign at ATNNCC College?ಶಿವಮೊಗ್ಗ
Previous Post

ಫಾರ್ಮಸಿ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ದಿ ಕಾರ್ಯಾಗಾರ

Next Post

ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL