• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆರೇಳು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರ, ವಿಮಾನ ನಿಲ್ದಾಣದ ಮಣ್ಣು ಪರೀಕ್ಷೆ, ಭೂಮಿ ನೀಡಿ ಸಹಕರಿಸಿದ ರೈತರ ಬಗ್ಗೆ ನಂಜಯ್ಯನಮಠ್ ಹೇಳಿದ್ದೇನು.?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 16, 2026
in ಶಿವಮೊಗ್ಗ
ಆರೇಳು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರ, ವಿಮಾನ ನಿಲ್ದಾಣದ ಮಣ್ಣು ಪರೀಕ್ಷೆ, ಭೂಮಿ ನೀಡಿ ಸಹಕರಿಸಿದ ರೈತರ ಬಗ್ಗೆ ನಂಜಯ್ಯನಮಠ್ ಹೇಳಿದ್ದೇನು.?
Share on FacebookShare on TwitterShare on WhatsApp
ಶಿವಮೊಗ್ಗ: ಮುಂದಿನ ಆರೇಳು ತಿಂಗಳ ಅವಧಿಯೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ವಿಮಾನಗಳು ಏರಿಳಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆಬ್ರವರಿ ಮಾಸಾಂತ್ಯದೊಳಗಾಗಿ ಸುಮಾರು 6 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ನಂಜಯ್ಯನಮಠ್‌ ಅವರು ಹೇಳಿದರು.
ಅವರು ಇಂದು ನಗರದ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಹಿಂದೆ ನವೀಕರಣಗೊಳ್ಳದೆ ಬಾಕಿ ಉಳಿದಿದ್ದ ವಿಮಾನ ನಿಲ್ದಾಣದ ಪರವಾನಗಿ ನವೀಕರಣದ ಸಮಸ್ಯೆಯನ್ನು ಇತ್ಯರ್ಥಗೊಳಿಸಿ, ಆಡಳಿತಾತ್ಮಕ ಅಡತಡೆಗಳನ್ನು ನಿವಾರಿಸಿಕೊಳ್ಳಲಾಗಿದೆ. ಅಲ್ಲದೇ ಬಾಕಿ ಇದ್ದ 22.00ಲಕ್ಷ ರೂ. ದಂಡ ಪಾವತಿಸಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಪರವಾನಗಿ ನವೀಕರಿಸುವ ಅಗತ್ಯವಿರುವುದಿಲ್ಲ ಎಂದವರು ತಿಳಿಸಿದರು.
ಹವಾಮಾನ ವೈಪರೀತ್ಯ ಹಾಗೂ ಮತ್ತಿತರ ಹಲವು ಕಾರಣಗಳಿಗಾಗಿ ಇಳಿಯಬೇಕಾದ ವಿಮಾನಗಳು ಇಳಿಯದೇ ಹಿಂದಿರುಗಿ ಹೋಗುವುದನ್ನು ನಿಯಂತ್ರಿಸಲು, ರಾತ್ರಿ ಸಂಚಾರಕ್ಕೆ ಮತ್ತು ಸರಕು ಸಾಗಾಣಿಕೆಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಗತ್ಯವಾಗಿರುವ ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ (DBOR)ಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಅಲ್ಲದೇ ವಿದ್ಯುತ್‌ ಸಂಪರ್ಕ ವ್ಯವಸ್ಥೆಯೂ ಪೂರ್ಣಗೊಂಡಿದೆ ಎಂದರು.
ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಭೂಮಿ ನೀಡಿ ಸಹಕರಿಸಿದ ರೈತರ 370 ಕುಟುಂಬಗಳಿಗೆ ಅಂದಿನ ಅಧಿಕಾರಿ-ಜನಪ್ರತಿನಿಧಿಗಳು ನೀಡಿದ ಭರವಸೆಯಂತೆ ತಲಾ ಒಂದು ನಿವೇಶನ ನೀಡಿರುವುದಿಲ್ಲ. ಈ ಬಗ್ಗೆ ಸಂತ್ರಸ್ಥರು ಅನೇಕ ಬಾರಿ ಸರ್ಕಾರದ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ. ಅಲ್ಲದೇ ನ್ಯಾಯಾಲಯವೂ ಕೂಡ ಸಂತ್ರಸ್ಥರ ಪರವಾಗಿ ತೀರ್ಪು ನೀಡಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಯ ಇತ್ಯರ್ಥಗೊಳಿಸಲು ಖುದ್ದಾಗಿ ಮಾನ್ಯ ಮುಖ್ಯಮಂತ್ರಿಗಳ ಗಮನಸೆಳೆದು ಅಗತ್ಯವಿರುವು ಅನುದಾನ ಬಿಡುಗಡೆಗೊಳಿಸಲು ಒತ್ತಾಯಿಸಲಾಗುವುದು.
                                                       -ನಂಜಯ್ಯನಮಠ್‌, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು
                                                                 ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅ‍ಧ್ಯಕ್ಷರು
ನೈಟ್‌ಲ್ಯಾಂಡಿಂಗ್‌ ವ್ಯವಸ್ಥೆ ಕಲ್ಪಿಸಲು ನಿಯಮಾನುಸಾರ ಸದರಿ ಪ್ರದೇಶದಲ್ಲಿನ ಮಣ್ಣಿನ ಗುಣಮಟ್ಟದ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಇನ್ನೊಂದು ವಾರದಲ್ಲಿ ವರದಿ ಬರುವ ನಿರೀಕ್ಷೆ ಹೊಂದಲಾಗಿದೆ ಎಂದ ಅವರು, ಈ ಎಲ್ಲಾ ಕಾಮಗಾರಿಗಳ ಸಕಾಲಿಕ ಪರಿಶೀಲನೆಗಾಗಿ ತಾವು ಖುದ್ದಾಗಿ ಆಗಮಿಸಿ, ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವುದಾಗಿ ಅವರು ತಿಳಿಸಿದರು.
ಉಡಾನ್ ಯೋಜನೆ ಮುಂದುವರಿಸಲು ಕೇಂದ್ರಕ್ಕೆ ಮನವಿ : ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಹೈದ್ರಾಬಾದ್‌, ಗೋವಾ ಸೇರಿದಂತೆ ಹಲವು ಪ್ರದೇಶಗಳಿಗೆ ನಿರಂತರವಾಗಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಪುರಸ್ಕೃತ ಹಾಗೂ ವಿಮಾನ ಪ್ರಯಾಣಕ್ಕೆ ರಿಯಾಯಿತಿ ಒದಗಿಸುವ ‘ಉಡಾನ್’ ಯೋಜನೆಯ ಅವಧಿ ಶೀ‍ಘ್ರದಲ್ಲಿ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಪ್ರಯಾಣಿಕರಿಗೆ ಹೆಚ್ಚಿನ ಪ್ರಯಾಣದರ ಪಾವತಿಸುವ ಹೊರೆ ಬೀಳದಂತೆ ನೋಡಿಕೊಳ್ಳಲು ಸ್ಥಳೀಯ ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರವನ್ನು ಪಡೆದು, ಸದರಿ ಯೋಜನೆಯನ್ನು ಮುಂದುವರೆಸಲು ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದವರು ನುಡಿದರು.
ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾಯ್ದಿರಿಸಲಾಗಿರುವ 17ಎಕರೆ ನಿವೇಶನದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಬೃಹತ್‌ ವಾಣಿಜ್ಯ ಸಂಕೀರ್ಣ ಮತ್ತು ಪಂಚತಾರಾ ಹೋಟೆಲ್‌ನ್ನು ನಿರ್ಮಿಸುವ ಕುರಿತು ಈಗಾಗಲೇ ನಿಗಮದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲಿ ಈ ವಿಷಯದ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಸದರಿ ವಿಮಾನ ನಿಲ್ಧಾಣದಲ್ಲಿ ಪೈಲಟ್‌ ತರಬೇತಿ ಕೇಂದ್ರ ಆರಂಭಿಸಲು ಈ ಹಿಂದೆ ಖಾಸಗಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಯಾವುದೇ ಕಂಪನಿಗಳು ಆಸಕ್ತ ವಹಿಸಿರುವುದು ಕಂಡುಬಂದಿರುವುದಿಲ್ಲ. ಆದಾಗ್ಯೂ ಪೈಲಟ್‌ ತರಬೇತಿ ಕೇಂದ್ರ ಆರಂಭಿಸಲು ಇನ್ನೊಮ್ಮೆ ಆಸಕ್ತ ತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದರು.
ಸಭೆಯಲ್ಲಿ ವಿಮಾನ ನಿಲ್ದಾಣದ ಮುಖ್ಯಸ್ಥ ಕ|| ಶಮಂತ್‌, ವಿದ್ಯಾಧರ್‌ ಸಾಲಿಮಠ್‌, ಮುಖಂಡ ಯೋಗೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsshimogashivamoggashivamogga airportನಂಜಯ್ಯನಮಠ್‌ವಿಮಾನ ನಿಲ್ದಾಣಶಿವಮೊಗ್ಗ
Previous Post

ಶಿವಮೊಗ್ಗ ಭೂ ಸ್ವಾಧೀನಾಧಿಕಾರಿ ಲೋಕಾ ಬಲೆಗೆ

Next Post

ಮಗಳ ಮನೆಗೆ ಹೊರಟಿದ್ದ ದಂಪತಿಗಳಿಗೆ ಅಪಘಾತ, ಪತಿ ಸಾವು, ಪತ್ನಿ ಆಸ್ಪತ್ರೆಗೆ ದಾಖಲು, ಹೇಗಾಯ್ತು ಘಟನೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಗಳ ಮನೆಗೆ ಹೊರಟಿದ್ದ ದಂಪತಿಗಳಿಗೆ ಅಪಘಾತ, ಪತಿ ಸಾವು, ಪತ್ನಿ ಆಸ್ಪತ್ರೆಗೆ ದಾಖಲು, ಹೇಗಾಯ್ತು ಘಟನೆ?

ಮಗಳ ಮನೆಗೆ ಹೊರಟಿದ್ದ ದಂಪತಿಗಳಿಗೆ ಅಪಘಾತ, ಪತಿ ಸಾವು, ಪತ್ನಿ ಆಸ್ಪತ್ರೆಗೆ ದಾಖಲು, ಹೇಗಾಯ್ತು ಘಟನೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL