• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 26, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು
Share on FacebookShare on TwitterShare on WhatsApp

1. ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ, ಪತಿಗೆ ಜೈಲು  ಶಿಕ್ಷೆ, ದಂಡ

ಶಿವಮೊಗ್ಗ: ವರದಕ್ಷಿಣೆ ಹಾಗೂ ಸೈಟ್‌ಗಾಗಿ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದ ಪತಿಗೆ ಶಿಕ್ಷೆ ವಿಧಿಸಿ ಇಲ್ಲಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯವು ತೀರ್ಪು ನೀಡಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರು ನಿವಾಸಿ ಮಂಜುನಾಥ್ ಶಿಕ್ಷೆಗೆ ಒಳಗಾದ ವ್ಯಕ್ತಿ.
ಕಲಂ 498 (ಎ) ಅಪರಾಧಕ್ಕೆ ೩ ವರ್ಷ ಸಾದಾ ಸಜೆ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಐಪಿಸಿ ಕಲಂ 506 ರ ಅಡಿ 2 ವರ್ಷ ಸಾದಾ ಶಿಕ್ಷೆ ಮತ್ತು 5 ಸಾವಿರ ದಂಡವನ್ನು ವಿಧಿಸಲಾಗಿದೆ.

ನ್ಯಾಯಾಧೀಶರಾದ ಸಿದ್ಧರಾಜು ಎನ್ ಕೆ ಅವರು 24-06-2026 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ ಕೆ ಕಿರಣ್‌ಕುಮಾರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ವಿವರ

ತವರು ಮನೆಯಿಂದ ಹೆಚ್ಚಿನ ವರದಕ್ಷಿಣೆ ತರುವಂತೆ ಹಾಗೂ ಸೈಟ್ ಕೊಡಿಸುವಂತೆ ಪತಿಯು ಮಾನಸಿಕ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಪತ್ನಿಯು ೨೦೧೭ ರಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪ್ರಭಾವತಿ ಸಿ ಅವರು ೨೦೧೮ ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಇದನ್ನೂ ಓದಿ >  ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

2. ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ: “ಶಿವಮೊಗ್ಗದ ಸಾಂಪ್ರದಾಯಿಕ ಕ್ರೀಡಾ ಪರಂಪರೆಯ ಜೀವಂತಿಕೆ ಹಾಗೂ ಕ್ಷೇತ್ರದ ನಿರಾಶ್ರಿತ ಬಡ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶಿವಮೊಗ್ಗ ನಗರ ಮತ್ತು ತಾಲೂಕಿಗೆ ಸಂಬಂಧಿಸಿದ ಪ್ರಮುಖ ಎರಡು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಜ್ಞಾಪನಾ ಪತ್ರ ಸಲ್ಲಿಸಿದರು.
ಕ್ರೀಡಾ ಶಾಲೆಯ ಪುನಶ್ಚೇತನ: ಶಿವಮೊಗ್ಗ ಜಿಲ್ಲೆಯು ಕುಸ್ತಿ ಕ್ರೀಡೆಗೆ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ನೂರಾರು ಕ್ರೀಡಾಪಟುಗಳು ದೇಶ-ವಿದೇಶಗಳಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಗೌರವ ತಂದಿದ್ದಾರೆ. ಶಿವಮೊಗ್ಗ ನಗರದಲ್ಲಿ ‘ಕುಸ್ತಿ ಕ್ರೀಡಾ ಶಾಲೆ’ಯನ್ನು ಮುಂದುವರಿಸಲು ಅಗತ್ಯ ಅನುದಾನ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂದು ಶಾಸಕರು ಕ್ರೀಡಾ ಇಲಾಖೆಯ ಪರವಾಗಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಮಿಳಘಟ್ಟ ನಿವಾಸಿಗಳ ಹಿತರಕ್ಷಣೆ: ಶಿವಮೊಗ್ಗ ತಾಲೂಕು ಕಸಬಾ-01 ಹೋಬಳಿಯ ಮಿಳಘಟ್ಟ ಗ್ರಾಮದ ಸರ್ವೆ ನಂಬರ್ 92ರ ಸರ್ಕಾರಿ ಕರಾಬು ಗುಂಡುತೋಪು ಜಾಗದಲ್ಲಿ ದಶಕಗಳಿಂದ ನೂರಾರು ಬಡ ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಆದರೆ ಅವರಿಗೆ ಇಂದಿನವರೆಗೂ ಹಕ್ಕುಪತ್ರ ದೊರೆತಿಲ್ಲ. ಈ ಸೂಕ್ಷ್ಮ ಸಮಸ್ಯೆಯನ್ನು ಕಂದಾಯ ಇಲಾಖೆಯ ನಿಯಮಾವಳಿಗಳ ಅನ್ವಯ ವಿಶೇಷ ಪ್ರಕರಣವೆಂದು ಪರಿಗಣಿಸಿ, ಅಲ್ಲಿನ ಅರ್ಹ ನಿವಾಸಿಗಳಿಗೆ ತಕ್ಷಣವೇ ಹಕ್ಕುಪತ್ರಗಳನ್ನು ವಿತರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಶಾಸಕರ ಅಹವಾಲುಗಳನ್ನು ಆಲಿಸಿದ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ >  ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

3. ನವೋದಯ ವಿದ್ಯಾಲಯದಲ್ಲಿ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡವಾರು 50 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು 01.06.2009 ರಿಂದ 31.7.2011 ರ ದಿನಾಂಕದೊಳಗೆ ಜನಿಸಿರಬೇಕು.
ಅರ್ಹ ಆಸಕ್ತ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿದ್ಯಾಲಯದ ಕಾರ್ಯಾಲಯಕ್ಕೆ ಜೂ. 30 ರ ಒಳಗಾಗಿ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ > ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

4. ಸಂಸ್ಕøತ ಅಧ್ಯಯನಕ್ಕೆ ಸುವರ್ಣಾವಕಾಶ: ಮೈಸೂರಿನ ಮಹಾರಾಜ ಸರ್ಕಾರಿ ಸಂಸ್ಕೃತ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮೈಸೂರಿನ ಮಹಾರಾಜ ಸರ್ಕಾರಿ ಸಂಸ್ಕೃತ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ.
ಕಾಲೇಜಿನಲ್ಲಿ ಶಾಸ್ತ್ರೀ (ಬಿ.ಎ.) – 3 ವರ್ಷಗಳ ಪದವಿ ಕೋರ್ಸ್ ಹಾಗೂ ಆಚಾರ್ಯ (ಎಂ.ಎ.) – 2 ವರ್ಷಗಳ ಸ್ನಾತಕೋತ್ತರ ಕೋರ್ಸ್‍ಗಳಿಗೆ ಪ್ರವೇಶ ನೀಡಲಾಗುತ್ತಿದೆ. ವ್ಯಾಕರಣ, ಪೂರ್ವಮೀಮಾಂಸಾ, ಧರ್ಮಶಾಸ್ತ್ರ, ನವ್ಯನ್ಯಾಯ, ಜ್ಯೋತಿಷ್ಯ, ದ್ವೈತ ವೇದಾಂತ, ಅದ್ವೈತ ವೇದಾಂತ, ವಿಶಿಷ್ಟದ್ವೈತ ವೇದಾಂತ ಹಾಗೂ ಶಕ್ತಿ-ವಿಶಿಷ್ಟದ್ವೈತ ವೇದಾಂತ ಸೇರಿದಂತೆ ವಿವಿಧ ಶಾಸ್ತ್ರ ವಿಭಾಗಗಳಲ್ಲಿ ಅಧ್ಯಯನದ ಅವಕಾಶ ಲಭ್ಯವಿದೆ.
ಸಂಸ್ಕೃತ ಶಿಕ್ಷಣದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಪ್ರವೇಶ ಮುಕ್ತವಾಗಿದ್ದು, ಯಾವುದೇ ವಯೋಮಿತಿ, ಜಾತಿ, ಮತ ಅಥವಾ ಲಿಂಗಭೇದವಿಲ್ಲದೆ ವಿದ್ಯಾಭ್ಯಾಸ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಪ್ರವೇಶಾತಿ ನೋಂದಣಿಗಾಗಿ ಆಸಕ್ತರು ಕಾಲೇಜಿನ ಪ್ರಾಂಶುಪಾಲರಾದ ಪಿ. ಸತ್ಯನಾರಾಯಣ (ಮೊ.: 93410 55933) ಅಥವಾ ಪ್ರಥಮ ದರ್ಜೆ ಸಹಾಯಕರು (ಮೊ.: 89714 00444) ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಪಿ.ಸತ್ಯನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ > ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

5. ಗ್ರಾಮೀಣ ಅಂಚೆ ನೌಕರರ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ(ಎಐಜಿಡಿಎಸ್‍ಯು) ಮುಖ್ಯ ಅಂಚೆ ಕಚೇರಿ ಮುಂಭಾಗ ಸಂಘದ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ಅಸಹಕಾರ ಪ್ರತಿಭಟನೆ ನಡೆಸಿತು.
2026 ಮೇ 23ರಂದು ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದ ಸಂಘದ 13ನೇ ಅಖಿಲ ಭಾರತ ಸಮ್ಮೇಳನದಲ್ಲಿ ಗ್ರಾಮೀಣ ಡಾಕ್ ಸೇವಕರ ಸಂಘ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಬೇಡಿಕೆಗಳೊಂದಿಗೆ ಕಾರ್ಯ ಯೋಜನೆಯನ್ನು ಅಂಗೀಕರಿಸಲಾಗಿತ್ತು. ಜೂ. 23ರಂದು ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ನಡೆಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಐಜಿಡಿಎಸ್‍ಯು ನ ಅಧ್ಯಕ್ಷ ಹೆಚ್.ಜಿ. ವೆಂಕಟೇಶ್, ಕಾರ್ಯದರ್ಶಿ ಭಾಸ್ಕರಶೆಟ್ಟಿ ಮತ್ತಿತರರು ಇದ್ದರು.
ಶಿವಮೊಗ್ಗ:  ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ, ಮತ್ತು ಅಕ್ರಮ ಸಾಗಾಣಿಕೆ ವಿರೋಧಿ, ದಿನದ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ, 5 ಕೆ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು. ಮ್ಯಾರಥಾನ್ ಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈದಾನದಿಂದ  ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ, ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್.ಎನ್‌ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎ ಜಿ ಕಾರಿಯಪ್ಪ ಉಪಸ್ಥಿತರಿದ್ದರು.

ಮ್ಯಾರಥಾನ್ ಅಶೋಕ ವೃತ್ತದಿಂದ ಎಎ ವೃತ್ತ ನಂತರ ಗೋಪಿ ವೃತ್ತ ಅಲ್ಲಿಂದ ಜೈಲ್ ವೃತ್ತ ನಂತರ ಹೆಲಿಪ್ಯಾಡ್ ವೃತ್ತದ ಮುಖಾಂತರ ಡಿಎಆರ್ ಗೆ ಬಂದು ಮ್ಯಾರಥಾನ್ ಅನ್ನು ಮುಕ್ತಾಯ ಮಾಡಲಾಯಿತು. ನಂತರ ವಿಜೇತರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ಮ್ಯಾರಥಾನ್ ನಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ 05 ಕಿಮೀ ಮ್ಯಾರಥಾನ್ ಓಟದಲ್ಲಿ ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಅವರ ಪುತ್ರಿ ತನುಶ್ರೀ ಮೊದಲನೆ ಸ್ಥಾನವನ್ನು ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್.ಎನ್‌ ಬಹುಮಾನ ವಿತರಿಸಿ ಅಭಿನಂದಿಸಿದರು.
Tags: Good Morning Shivamogakannada newskannada news livelatest newsshimogashivamoggaWhat has happened in Shivamogga so far? Here are the top 5 news stories.ಶಿವಮೊಗ್ಗ
Previous Post

ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL