ಶಿವಮೊಗ್ಗ: ಹೊಸನಗರ ವಿಧಾನ ಸಭಾ ಕ್ಷೇತ್ರದ ಮರು ಘೋಷಣೆಗೆ ಆಗ್ರಹಿಸಿ ನಗರದಿಂದ ರಿಪ್ಪನ್ ಪೇಟೆಯವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪಾದಯಾತ್ರೆ ಸಭೆಯಲ್ಲಿ ಮಾತನಾಡಿದ ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ರಚನಾ ಸಮಿತಿ ಅಧ್ಯಕ್ಷರಾಗಿರುವ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್‌ಸ್ಥಾಪನೆಗೆ ಬೇಡಿಕೆ ಸಲ್ಲಿಸುವ ಹಕ್ಕು ಇಲ್ಲಿನ ಜನತೆಗಿದೆ. ಮುಳುಗಡೆಯಿಂದ ಬದುಕು ಕಳೆದುಕೊಂಡ ಜನತೆಗೆ ಆಡಳಿತಾತ್ಮಕ ಸುವ್ಯವಸ್ಥೆ ಸಿಗುವಂತಾಗಲು ಪ್ರತ್ಯೇಕ ಕ್ಷೇತ್ರ ರಚನೆಯೇ ಪರಿಹಾರವಾಗಿದೆ ಎಂದು ಹೇಳಿದರು.
ಇದನ್ನೂ ಓದಿ > ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ
ಹೊಸನಗರದ ಜನತೆ ಒಂದಲ್ಲಾ ಒಂದು ಸಂಕಷ್ಟ ಅನುಭವಿಸುತ್ತಲೇ ಬಂದಿದ್ದಾರೆ. ಕಳೆದ 25ವರ್ಷಗಳ ಹಿಂದೆ ಕ್ಷೇತ್ರವನ್ನೂ ಕಳೆದುಕೊಂಡಿದ್ದೇವೆ. ತಾಲೂಕನ್ನು ಇಬ್ಭಾಗ ಮಾಡಿ ಎರಡು ಕ್ಷೇತ್ರಗಳಿಗೆ ಹಂಚಿರುವುದು ಅನ್ಯಾಯ. ಈಗ ಕಾಲ ಕೂಡಿಬಂದಿದೆ. ನಮ್ಮ ಧ್ವನಿ ಗಟ್ಟಿಯಾಗಬೇಕಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ರಚನೆ ಆಗುವವವರೆಗೂ ಹೋರಾಟದ ನಿರಂತರತೆ ಕಾಪಾಡಿಕೊಳ್ಳಬೇಕಿದೆ. ಸಾರ್ವಜನಿಕರು ಭಿನ್ನ ಭೇದ ಮರೆತು ಪಾಲ್ಗೊಳ್ಳಬೇಕೆಂದು ಅವರು ಕರೆ ನೀಡಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, 2008ರ ಮೊದಲು ನಡೆದ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿಯೇ ತಮಗೆ ಆಡಳಿತಾತ್ಮಕ ಸಮಸ್ಯೆ ಆಗುವ ಮುನ್ಸೂಚನೆ ಸಿಕ್ಕಿತ್ತು. ತಾವು ಹಾಗೂ ಕಾಗೋಡು ತಿಮ್ಮಪ್ಪ ಹೊಸನಗರ ಕ್ಷೇತ್ರ ರದ್ದುಗೊಳಿಸುವ ತೀರ್ಮಾನವನ್ನು ವಿರೋಧಿಸಿದ್ದೆವು. ಆದರೆ ಅಂದಿನ ಆಯೋಗ ನಮ್ಮ ಅಹವಾಲನ್ನು ಮಾನ್ಯ ಮಾಡಲಿಲ್ಲ. ಕೇಂದ್ರ ಸರಕಾರ ಈಗ ಪುನರ್‌ವಿಂಗಡಣೆಗೆ ಮುಂದಾಗಿದೆ. ವಿಶೇಷ ಲೋಕಸಭಾ ಅಧಿವೇಶನ ಸಹಾ ನಡೆಯಲಿದೆ. ಮತ್ತೊಮ್ಮೆ ಕ್ಷೇತ್ರ ಪುನರ್‌ರಚನೆ ಆಗುವ ವಿಶ್ವಾಸವಿದೆ ಎಂದರು.
ಇದನ್ನೂ ಓದಿ > ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಹೊಸನಗರ ಕ್ಷೇತ್ರ ಹೋರಾಟಕ್ಕೆ ತಮ್ಮ ಸಂಪೂರ್ಣ ಸಹಮತವಿದೆ. ಒಂದು ತಾಲೂಕು ಎರಡು ಕ್ಷೇತ್ರಗಳಿಗೆ ಹಂಚಿ ಹೋಗಿರುವುದರಿಂದ ಕೇವಲ ಜನತೆಗಷ್ಟೇ ಅಲ್ಲ, ಆಡಳಿತ ನಡೆಸುವವರಿಗೂ ಸಮಸ್ಯೆಗಳಾಗುತ್ತವೆ ಎಂದರು.
ನಾರಾಯಣಗುರು ಮಠದ ಶ್ರೀರೇಣುಕಾನಂದ ಸ್ವಾಮೀಜಿ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕಿಮ್ಮನೆ ರತ್ನಾಕರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ, ಹೋರಾಟ ಸಮಿತಿಯ ಪ್ರಮುಖರಾದ ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಕೆ.ವಿ. ಕೃಷ್ಣಮೂರ್ತಿ, ಹಾಲಗದ್ದೆ ಉಮೇಶ್, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಎನ್.ಆರ್. ದೇವಾನಂದ್, ಚಿದಂಬರ, ಆಲುವಳ್ಳಿ ವೀರೇಶ್, ಎಂ.ಎಂ. ಪರಮೇಶ್, ಬಂಡಿ ರಾಮಚಂದ್ರ, ಶ್ವೇತಾ ಬಂಡಿ, ಸುಮಾ ಸುಬ್ರಹ್ಮಣ್ಯ, ಕರುಣಕರ ಶೆಟ್ಟಿ, ನಾರಾಯಣ ಕಾಮತ್, ಸುರೇಶ್ ಸ್ವಾಮಿರಾವ್, ಮುರುಳಿ, ರಿಪ್ಪನ್‌ಪೇಟೆ ಚಾಬುಸಾಬ್, ರಿಪ್ಪನ್‌ಪೇಟೆ ವರ್ತೆಶ್, ಚರ್ಚ್ ಪಾದ್ರಿಗಳು ಮಾಸೀದಿಯ ಧರ್ಮಗುರುಗಳು ವಿವಿಧ ಧಾರ್ಮಿಕ ಸಂಸ್ಥೆ ಪ್ರಮುಖರು ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
95ವರ್ಷದ ಮಾಜೀ ಶಾಸಕ ಬಿ.ಸ್ವಾಮಿರಾವ್ ಪಾದಯಾತ್ರೆಯಲ್ಲಿ ಬಾಗಿ
ನನ್ನ ಜೀವಿತಾವಧಿಯಲ್ಲಿ ಹೊಸನಗರ ಕ್ಷೇತ್ರ ಮಾಡಬೇಕು ಹೊಸನಗರ ಕ್ಷೇತ್ರಕ್ಕೆ ಶಾಸಕರನ್ನು ಮಾಡಬೇಕು ಎಂಬ ಹಠ ಹಿಡಿದು ಈ ಹೋರಾಟದ ರೂವಾರಿಯಾಗಿರುವ ಹೊಸನಗರ ಕ್ಷೇತ್ರದ ಮಾಜೀ ಶಾಸಕರಾದ ಬಿ.ಸ್ವಾಮಿರಾವ್‌ರವರು 95ನೇ ವಯಸ್ಸಿನಲ್ಲಿ ಯಾವುದೇ ಯುವಕರಿಗಿಂತ ಕಮ್ಮಿಯಿಲ್ಲದಂತೆ ನಗರ ಬಿದನೂರಿನಿಂದ ಹೊಸನಗರಕ್ಕೆ ಸುಮಾರು 16ಕಿ.ಮೀ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದು, ನಾಳೆಯು ಸುಮಾರು 26 ಕಿ.ಮೀಟರ್ ದೂರದ ರಿಪ್ಪನ್‌ಪೇಟೆಯವರೆವಿಗೂ ನಡೆಯುವುದಾಗಿ ಹೇಳಿದ್ದು ಯಾರ ಮಾತಿಗೂ ಸಪ್ಪು ಹಾಕದೇ ಯಾವುದೇ ವಾಹನವನ್ನು ಏರದೇ ಕಲ್ನಾಡಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ.














