• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ , ಶೀಘ್ರ ಆದೇಶ

ಎಂಪಿ ರಾಘವೇಂದ್ರ | ಸಾಗರ ಮಾರಿಕಾಂಬ ಜಾತ್ರೆ ಅವಧಿಯಲ್ಲಿ ಪ್ರತಿನಿತ್ಯ ರೈಲು ಸಂಚಾರಕ್ಕೆ ಮನವಿ | ಕೇಂದ್ರ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 29, 2026
in ರಾಜ್ಯ, ಶಿವಮೊಗ್ಗ
ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ , ಶೀಘ್ರ ಆದೇಶ
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಸಾಗರ ಶ್ರೀ ಮಾರಿಕಾಂಬಾ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಯಶವಂತಪುರ-ಶಿವಮೊಗ್ಗ ನಡುವಿನ ಎಕ್ಸ್’ಪ್ರೆಸ್ ರೈಲನ್ನು ತಾಳಗುಪ್ಪದವರೆಗೂ ವಿಸ್ತರಣೆ ಮಾಡಲಾಗುತ್ತಿದ್ದು, ಶೀಘ್ರ ಆದೇಶ ಹೊರ ಬೀಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B.Y. Ragavendra ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿವರವಾದ ಮಾಹಿತಿ ನೀಡಿದ್ದಾರೆ.
ಫೆಬ್ರವರಿ 3ರಿಂದ 11ರವರೆಗೆ ನಡೆಯಲಿರುವ ‘ಮಲೆನಾಡಿನ ಮಹಾಕುಂಭ’ ಎಂದೇ ಪ್ರಸಿದ್ಧವಾಗಿರುವ ಸಾಗರ ತಾಲ್ಲೂಕಿನ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಈ ಎಲ್ಲಾ ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸುವಂತೆ ಕೋರಿ ಸಂಸದ ಬಿ.ವೈ. ರಾಘವೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ #v.somana ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ರೈಲ್ವೆ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಕುರಿತಂತೆ ಅಧಿಕೃತ ಆದೇಶ ಇನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.
ಮೂರು ವರ್ಷಕ್ಕೊಮ್ಮೆ ನಡೆಯುವ ಈ ಐತಿಹಾಸಿಕ ಮಾರಿಕಾಂಬಾ ಜಾತ್ರೆಗೆ, ರಾಜ್ಯದ ನಾನಾ ಕಡೆಗಳಿಂದ ಅಂದಾಜು 25 ರಿಂದ 30 ಲP್ಷÀ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ, ಸುರಕ್ಷಿತ ಪ್ರಯಾಣದ ಅನುಕೂಲ ಒದಗಿಸಲು ವಿಶೇಷ ರೈಲ್ವೆ ಸೌಲಭ್ಯ ಕಲ್ಪಿಸುವ ಅಗತ್ಯವನ್ನು ಒತ್ತಿ ಹೇಳಿ, ಕೇಂದ್ರ ಸರ್ಕಾರದ ವಿಶೇಷ ಪರಿಗಣನೆ ಹಾಗೂ ಸಹಕಾರ ಅಗತ್ಯವೆಂದು ಸಂಸದ ರಾಘವೇಂದ್ರ ಪ್ರತಿಪಾದಿಸಿದ್ದು, ಇದಕ್ಕೆ ಕೇಂದ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಂಸದರ ಕಚೇರಿ ತಿಳಿಸಿದೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವ ಸಂಸದರು, ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುತ್ತಿರುವ ರೈಲು ಸಂಖ್ಯೆ 16581/82 (ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್) ಅನ್ನು ಜಾತ್ರೆಯ ಅವಧಿಯಲ್ಲಿ, ಅಂದರೆ ಫೆಬ್ರವರಿ 3 ರಿಂದ 11 ರವರೆಗೆ, ಪ್ರತಿದಿನ ಓಡಿಸುವಂತೆ ಕೋರಲಾಗಿದೆ. ಅಲ್ಲದೇ ಈ ರೈಲನ್ನು ಶಿವಮೊಗ್ಗದಿಂದ ಸಾಗರದ ಸಮೀಪದ ತಾಳಗುಪ್ಪ ನಿಲ್ದಾಣದವರೆಗೆ ವಿಸ್ತರಿಸುವಂತೆ ಕೋರಿz್ದÁರೆ.
ಸಂಸದರ ಕೋರಿಕೆ ಅನುಮೋದಿಸಿರುವ ರೈಲ್ವೆ ಇಲಾಖೆ ಶೀಘ್ರದಲ್ಲಿ ಈ ಕುರಿತು ಆದೇಶ ಹೊರಡಿಸಲಿದೆ.
ಮಲೆನಾಡಿನ ರೈಲ್ವೆ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಸಂಸದರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಂಸದ ರಾಘವೇಂದ್ರ ಅವರು, ಶ್ರೀ ಮಾರಿಕಾಂಬಾ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ, ಅನುಕೂಲ ಒದಗಿಸಬೇಕು, ಯಾವುದೇ ತೊಂದರೆಯಾಗಬಾರದು ಎನ್ನುವುದು ನನ್ನ ಆಶಯ. ಈ ತಾತ್ಕಾಲಿಕ ರೈಲ್ವೆ ಸೇವೆ ವ್ಯವಸ್ಥೆಯಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ನನ್ನ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರಕ್ಕೆ ಕೃತಜ್ಞತಾಪೂರ್ವಕ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.
ಈ ವಿಶೇಷ ರೈಲ್ವೆ ಸೇವೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಾರಿಕಾಂಬಾ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಾಗರದವರೆಗೆ ತಲುಪಲು ಸಾಧ್ಯವಾಗಲಿದ್ದು, ಜನದಟ್ಟಣೆ ನಿಯಂತ್ರಿಸಲು ಸಹಕಾರಿಯಾಗಲಿದೆ.

Tags: by ragavenreakannada newsmalnad newsmp by ragavendraSAGARANEWSshimogashivamoggatrain newsYeshwantpur-Shivamogga train
Previous Post

KSRTC ಬಸ್ ಹತ್ತಿ ವ್ಯಾನಿಟಿ ಬ್ಯಾಗ್ ನೋಡಿದ್ದ ಮಹಿಳೆಗೆ ಕಾದಿತ್ತು ಶಾಕ್!

Next Post

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕ ಅಸ್ವಸ್ಥ, ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕ ಅಸ್ವಸ್ಥ, ಸಾವು

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕ ಅಸ್ವಸ್ಥ, ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL