ಶಿವಮೊಗ್ಗ : ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ಮೃತಪಟ್ಟವರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ > > ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ, ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ!
ಇನ್ನು, ವಿಷಯ ತಿಳಿದ ತಕ್ಷಣ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > > ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು!














