ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಕ್ಕ ಪಡೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಕ್ಕ ಪಡೆಯ ಸಿಬ್ಬಂದಿ ಸೋಮವಾರ ಬಸ್ ನಿಲ್ದಾಣದಲ್ಲಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಯುವತಿಯೊಬ್ಬಳು ಅಳುತ್ತಾ ನಿಂತಿದ್ದರು. ಕೂಡಲೇ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ, ವ್ಯಕ್ತಿಯೊಬ್ಬನು ತನಗೆ ಉಪಟಳ ನೀಡುತ್ತಿರುವ ಬಗ್ಗೆ ಆಕೆ ಮಾಹಿತಿ ನೀಡಿದ್ದರು.
ಕಾರ್ಯಪ್ರವೃತ್ತರಾದ ಅಕ್ಕ ಪಡೆ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿ, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com













